ಹಾಡಿ ಕುಣಿದ ಬೆಳ್ಳಿ
Send us your feedback to audioarticles@vaarta.com
ಯಶಸ್ವಿನಿ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಹೆಚ್.ಆರ್.ರಾಜೇಶ್ ಅವರು ನಿರ್ಮಿಸು ತ್ತಿರುವಬೆಳ್ಳಿ ಚಿತ್ರಕ್ಕಾಗಿ ಶಶಾಂಕ್ ಅವರು ಬರೆದಿರುವ ಜನಿಸಿದೆ ಅನಿಸಿದೆ ಎಂಬ ಗೀತೆಯ ಚಿತ್ರೀಕರಣ ಸಕಲೇಶಪುರದಲ್ಲಿ ನಡೆದಿದೆ. ಶಿವರಾಜಕುಮಾರ್ ಹಾಗೂ ಕೃತಿ ಖರಬಂದ ಅಭಿನಯಿಸಿದ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಮಹೇಶ್(ಮುಸ್ಸಂಜೆಮಾತು) ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ವಿ.ಶ್ರೀಧರ್ ಸಂಗೀತ ನೀಡುತ್ತಿದ್ದಾರೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ,ದೀಪು.ಎಸ್.ಕುಮಾರ್ ಸಂಕಲನ, ಗಣೇಶ್ ಸಾಹಸ ನಿರ್ದೇಶನ, ಎ.ಹರ್ಷ, ಆದಿಲ್ ಶೇಖ್, ಮುರಳಿ ನೃತ್ಯ ನಿರ್ದೇಶನ ಹಾಗೂ ಸೀನು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಸೆಂಚುರಿ ಸ್ಟಾರ್ ಶಿವರಾಜಕುಮಾರ್, ಕೃತಿ ಖರಬಂದ, ವಿನೋದ್ ಪ್ರಭಾಕರ್, ದೀಪಕ್, ಒರಟ ಪ್ರಶಾಂತ್, ವೆಂಕಟೇಶ್, ಆದಿಲೋಕೇಶ್, ಪದ್ಮಾವಾಸಂತಿ, ಬಿ.ವಿ.ರಾಧಾ, ಶ್ರೀನಿವಾಸಮೂರ್ತಿ,ರಮೇಶ್ ಭಟ್, ನಾಗರಾಜ್, ಹರೀಶ್ ರೈ, ಲೋಕಿ, ನೀನಾಸಂ ಮಂಜು, ಭಾಸ್ಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರವಿಂದ್ ರಾವ್ ಕಾರ್ಯಕಾರಿ ನಿರ್ಮಾಪಕರಾಗಿರುವ ಬೆಳ್ಳಿ ಚಿತ್ರಕ್ಕೆ ಕೆ.ಜೆ.ರಾಜಶೇಖರ್ ಸಹ ನಿರ್ಮಾಪಕರಾಗಿದ್ದಾರೆ.
Follow us on Google News and stay updated with the latest!
-
Contact at support@indiaglitz.com
Comments